
ನ.17 ರಂದು ಭವ್ಯ ಪಿಂಛಿ ಪರಿವರ್ತನಾ ಸಮಾರಂಭ
ಉಜಿರೆ: ನಾರಾವಿ ಬಳಿ ಇರುವ ಹೊಸ್ಮಾರು ಸಿದ್ಧರವನ ಭಗವಾನ್ ಮಹಾವೀರಸ್ವಾಮಿ ಬಸದಿಯಲ್ಲಿ ಚಾತುರ್ಮಾಸ ವೃತಾಚರಣೆಯಲ್ಲಿರುವ ಪೂಜ್ಯ ಆರ್ಯಿಕಾ ಮುಕ್ತಿಮತಿ ಮಾತಾಜಿ ಅವರ ಭವ್ಯ ಪಿಂಛಿ ಪರಿವರ್ತನಾ ಸಮಾರಂಭ ಇದೇ ನ.17 ರಂದು ನಡೆಯಲಿದೆ ಎಂದು ಚಾತುರ್ಮಾಸ ಸಮಿತಿ ಅಧ್ಯಕ್ಷ ಎನ್. ಪ್ರೇಮ್ ಕುಮಾರ್ ಹೊಸ್ಮಾರು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಗಂಟೆ 7.30 ರಿಂದ ಬಸದಿಯಲ್ಲಿ ಸಾಮೂಹಿಕ ಪಂಚಪರಮೇಷ್ಠಿ ಆರಾಧನೆ ನಡೆಯಲಿದೆ. ಮಧ್ಯಾಹ್ನ ಗಂಟೆ 2.30ರಿಂದ ಪೂಜ್ಯ ಆರ್ಯಿಕಾ ಮುಕ್ತಿಮತಿ ಮಾತಾಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು.
ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು.
ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಮಹಿಳಾ ಕಾರ್ಯಾಧ್ಯಕ್ಷೆ ಅನಿತಾ ಸುರೇಂದ್ರ ಕುಮಾರ್, ಸುದರ್ಶನ್ ಜೈನ್, ಬಂಟ್ವಾಳ ಮತ್ತು ಮಂಗಳೂರಿನ ಜೈನ್ ಟ್ರಾವೆಲ್ಸ್ ಮಾಲಕ ರತ್ನಾಕರ್ ಜೈನ್ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡುವರು. ಹೊರನಾಡು ಜಯಶ್ರೀ ಜೈನ್ ಮತ್ತು ಬಳಗದವರಿಂದ ಜಿನಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.