
ನ.24 ರಂದು ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಫರ್ಧೆ ಬೆಳ್ತಂಗಡಿಯಲ್ಲಿ
ಉಜಿರೆ: ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷೆ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಜೈನ್‌ಮಿಲನ್ ಸಹಯೋಗದೊಂದಿಗೆ ನ.24 ರಂದು ಬೆಳ್ತಂಗಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಮಂಗಳೂರು ವಿಭಾಗಮಟ್ಟದ ಜಿನ ಭಜನಾ ಸ್ಪರ್ಧೆ ನಡೆಯಲಿದೆ ಎಂದು ಜಿನ ಭಜನಾ ಸ್ಪರ್ಧೆಯ ಸಂಯೋಜಕಿ ಉಜಿರೆಯ ಸೋನಿಯಾ ಯಶೋವರ್ಮ ಮತ್ತು ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ಡಾ. ನವೀನ್ ಕುಮಾರ್ ಜೈನ್ ಉಜಿರೆ ತಿಳಿಸಿದ್ದಾರೆ.
ನ.24 ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಜಿನ ಭಜನಾ ಸ್ಪರ್ಧೆ ಉದ್ಘಾಟಿಸುವರು. ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು.
ಪೆರಿಂಜೆ, ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ ಕುಮಾರ್, ವೇಣೂರು ದಿಗಂಬರ ಜೈನತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ಮತ್ತು ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡುವರು.
ಸಂಜೆ ಗಂಟೆ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುದರ್ಶನ ಜೈನ್, ಬಂಟ್ವಾಳ ಸಮಾರೋಪ ಭಾಷಣ ಮಾಡುವರು. ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು.