ನ.24 ರಂದು ಉಳ್ಳಾಲ ಉರೂಸ್ ದಿನ ನಿಗದಿ, ಧ್ವಜಾರೋಹಣ ಕಾರ್ಯಕ್ರಮ

ನ.24 ರಂದು ಉಳ್ಳಾಲ ಉರೂಸ್ ದಿನ ನಿಗದಿ, ಧ್ವಜಾರೋಹಣ ಕಾರ್ಯಕ್ರಮ

ಉಳ್ಳಾಲ: ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮ ಪಡೆಯುತ್ತಿರುವ ಖುತುಬುಝ್ಝಮಾನ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ಅವರ ಹೆಸರಿನಲ್ಲಿ 2025 ಎಪ್ರಿಲ್ ತಿಂಗಳಲ್ಲಿ ನಡೆಯುವ 22ನೇ ಪಂಚವಾರ್ಷಿಕ ಹಾಗೂ 423ನೇ ವಾರ್ಷಿಕ ಉಳ್ಳಾಲ ಉರೂಸ್ ಕಾರ್ಯಕ್ರಮದ ದಿನ ನಿಗದಿ ಹಾಗೂ ಧ್ವಜಾರೋಹಣ ಕಾರ್ಯಕ್ರಮವು ನ.24 ರಂದು ಬೆಳಿಗ್ಗೆ 10.30 ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ ಹೇಳಿದರು.

ಅವರು ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಆಟಕೋಯ ತಂಙಳ್ ಕುಂಬೋಳ್, ಸಯ್ಯಿದ್ ಅತ್ತಾವುಲ್ಲ ತಂಙಳ್, ವಿಧಾನ ಸಭಾಧ್ಯಕ್ಷ ಯುಟಿ ಖಾದರ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಯೆನೆಪೋಯ ಅಬ್ದುಲ್ಲಾ ಕುಂಞಿ ಹಾಜಿ, ಹಾಜಿ ಕಣಚೂರು ಮೋನು, ರಾಜಕೀಯ ಮುಖಂಡರಾದ ಬಿ.ಎಂ.ಫಾರೂಕ್, ಇನಾಯತ್ ಅಲಿ, ಯುಟಿ ಇಫ್ತಿಕರ್, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ಎಸ್‌ಎಂ ರಶೀದ್ ಹಾಜಿ, ಹಂಝ ಹಾಜಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ಧೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಜೊತೆ ಕಾರ್ಯದರ್ಶಿ ಮುಸ್ತಫಾ ಮದನಿನಗರ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article