ವಿದ್ಯಾರ್ಥಿನಿಯರ ಮೃತದೇಹ ತಡರಾತ್ರಿ ಹಸ್ತಾಂತರ: ರೆಸಾರ್ಟ್‌ನ ಮಾಲಕ, ಮೆನೇಜರ್ ಬಂಧನ
Monday, November 18, 2024
ಉಳ್ಳಾಲ: ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ.
ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ಭಾನು ವಾರ ತಡರಾತ್ರಿ ಆಗಮಿಸಿದ್ದು, ಮೂವರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಮೂವರ ಮೃತದೇಹವನ್ನು ತಡರಾತ್ರಿ ಮೈಸೂರಿಗೆಗೆ ಕೊಂಡೊಯ್ಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಂಧಿತ ಇಬ್ಬರನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ಮೂಲದ ಮೂವರು ವಿದ್ಯಾರ್ಥಿನಿಯರು ಶನಿವಾರ ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್‌ನಲ್ಲಿ ತಂಗಿದ್ದರು. ಭಾನುವಾರ ರೆಸಾರ್ಟ್‌ನ ಈಜು ಕೊಳದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿತ್ತು.