ಜಿಲ್ಲಾ ಮಟ್ಟದ ಚುನಾವಣಾ ಸಾಕ್ಷರತಾ ಸ್ಪರ್ಧೆ

ಜಿಲ್ಲಾ ಮಟ್ಟದ ಚುನಾವಣಾ ಸಾಕ್ಷರತಾ ಸ್ಪರ್ಧೆ


ಅಜ್ಜರಕಾಡು: ಡಿ.7 ರಂದು ಉಡುಪಿ ಜಿಲ್ಲಾ ಲೀಡ್ ಕಾಲೇಜ್‌ನ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಇಲ್ಲಿ ಉಡುಪಿ ಜಿಲ್ಲಾ ಮಟ್ಟದ ಚುನಾವಣಾ ಸಾಕ್ಷರತಾ ದಿನ-2025 ಸ್ಪರ್ಧೆಗಳು ನಡೆಯಿತು. ಜಿಲೆಯ ಏಳೂ ತಾಲೂಕುಗಳ ವಿಜೇತರುಗಳು ಇದರಲ್ಲಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಪಂಚಾಯತ್‌ನ ಪ್ರಥಮ ದರ್ಜೆ ಸಹಾಯಕರಾದಂತಹ ಅನಂತ ಕೃಷ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರ್ವರಿಗೂ ಶುಭ ಹಾರೈಸಿದರು. ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಸೋಜನ್ ಕೆ.ಜಾರ್ಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಹಾಗೂ ರಸಪ್ರಶ್ನೆ ಸ್ಪರ್ಧೆಯ ಕ್ವಿಜ್ ಮಾಸ್ಟರ್ ಆಗಿ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. 

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ ಸ್ವಾಗತಿಸಿದರು. ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕ ಯೋಗೇಶ್ ಡಿ.ಹೆಚ್. ವಂದಿಸಿ, ಕಾಲೇಜಿನ ಅಂಬಾಸಿಡರ್ ಪೂರ್ಣಿಮ ನಿರೂಪಿಸಿದರು.

ಜಿಲ್ಲಾ ಮಟ್ಟದ ಈ ಸ್ಪರ್ಧೆಯಲ್ಲಿ 32 ವಿದ್ಯಾರ್ಥಿಗಳು ರಸಪ್ರಶ್ನೆ, ಬಿತ್ತಿ ಚಿತ್ರ ಹಾಗೂ ವೀಡಿಯೋ ರೀಲ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article