ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ


ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು.

ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಕಳೆದ 6 ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು.
ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.
2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ವಿಧಾನಸಭೆ ಸ್ಪೀಕರ್. ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು.

ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article