
ರಿಕ್ಷಾ ಪಲ್ಟಿ: ಗಾಯಾಳು ಚಾಲಕ ಮೃತ್ಯು
Tuesday, December 17, 2024
ಬಂಟ್ವಾಳ: ಸಜಿಪ ಸಮೀಪದ ಕೊಳಕೆ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸಜೀಪನಡು ಗ್ರಾಮದ ನಿವಾಸಿ ರಿಚಾರ್ಡ್ ಮಾರ್ಟಿನ್ (58) ಮೃತಪಟ್ಟವರೆಂದು ಗುರುತಿಸಲಾಗಿದೆ.
ಡಿ.8 ರಂದು ಮೆಲ್ಕಾರ್-ಮುಡಿಪು ರಸ್ತೆಯ ಕೊಳಕೆಯಲ್ಲಿ ರಿಕ್ಷಾವನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಸ್ಕಿಡ್ ಆಗಿ ರಿಕ್ಷಾ ಪಲ್ಟಿಯಾಗಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.