
ನೀರು ಪೂರೈಕೆ ವ್ಯತ್ಯಯ
Tuesday, December 3, 2024
ಬಂಟ್ವಾಳ: ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಗ್ರಾಮದ ಕೌಡೇಲು ಪ್ರದೇಶದಲ್ಲಿ ಕುಡಿಯುವ ನೀರಿನ ಮುಖ್ಯ ಕೊಳವೆಯು ಒಡೆದು ನೀರಿನ ಸೋರಿಕೆಯಾಗುತ್ತಿರುವುದರಿಂದ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನಲೆಯಲ್ಲಿ ರೆಂಗೇಲು, ಶಾಂತಿಗುಡ್ಡೆ ಪರಿಸರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.