ಶಿಕ್ಷಣಕ್ಕೆ ಸರಕಾರದ ಆದ್ಯತೆ: ಸಚಿವ ದಿನೇಶ್ ಗುಂಡೂರಾವ್

ಶಿಕ್ಷಣಕ್ಕೆ ಸರಕಾರದ ಆದ್ಯತೆ: ಸಚಿವ ದಿನೇಶ್ ಗುಂಡೂರಾವ್


ಬಂಟ್ವಾಳ: ಸರ್ವರಿಗೂ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಶಿಕ್ಷಕರ ನೇಮಕಾತಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಇಂದು ತಾಲೂಕಿನ ನರಿಕೊಂಬುಗ್ರಾಮದ ಬೊಂಡಾಲದಲ್ಲಿ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಮಿನಿ ವಿಜ್ಞಾನ ಕೇಂದ್ರದ ಉದ್ಘಾಟನೆ ಮತ್ತು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. 

ಸರಕಾರಿ ಶಾಲೆಗಳಲ್ಲಿ ಕೊಠಡಿ ನಿರ್ಮಾಣ, ಆಟದ ಮೈದಾನ ಅಭಿವೃದ್ಧಿ ಸೇರಿದಂತೆ ಮೂಲ ಸೌಲಭ್ಯಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಶಿಕ್ಷಕರ ನೇಮಕಾತಿಗೂ ಆದ್ಯತೆ ನೀಡಲಾಗುತ್ತಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕೆಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿ, ಶುಭಹಾರೈಸಿದರು.

ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಚ್ಚಿದಾನಂದ ಶೆಟ್ಟಿ ಬೊಂಡಾಲ ಮತ್ತಿತರರು ಉಪಸ್ಥಿತರಿದ್ದರು.

ಹಾಸ್ಟೆಲ್ ಲೋಕಾರ್ಪಣೆ:

ಬಳಿಕ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಲ್ಲಡ್ಕದಲ್ಲಿ ನಿರ್ಮಾಣಗೊಂಡಿರುವ ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು. 

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿಕುಂದರ್, ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ಬಿಂದಿಯಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article