
ಬೆಳಗಾವಿ ಅಧಿವೇಶನ ಶತಮಾನೋತ್ಸವ ಪೂರ್ವಭಾವಿ ಪರಿಶೀಲನೆ
Tuesday, December 24, 2024
ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಎಐಸಿಸಿ ಅಧಿವೇಶನದ ಶತಮಾನೋತ್ಸವದ ಕಾರ್ಯಕ್ರಮದ ಪೂರ್ವಭಾವಿ ತಯಾರಿ ಹಿನ್ನೆಲೆಯಲ್ಲಿ ಡಿ.24 ರಂದು ವಿವಿಧ ಸ್ಥಳಗಳಲ್ಲಿ ಪರಿಶೀಲನೆಯನ್ನು ನಡೆಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಜಿ.ಸಿ. ಚಂದ್ರಶೇಖರ್ ಹಾಗೂ ಮಂಜುನಾಥ ಭಂಡಾರಿ ಅವರು ಕಾರ್ಯಕ್ರಮ ನಡೆಯುವ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.