ಅಮಿತ್ ಶಾ ಹೇಳಿಕೆ ಖಂಡಿಸಿ ಅಧಿವೇಶನದಲ್ಲಿ ಪ್ರತಿಭಟನೆ
Thursday, December 19, 2024
ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಿರುವ 'ಡಾ. ಬಿ.ಆರ್. ಅಂಬೇಡ್ಕರ್ ಅವರ ನೆನಪನ್ನು ಮಾಡುವುದು ಒಂದು ಪ್ಯಾಶನ್ ಆಗಿದೆ' ಎಂಬ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹಾಗೂ ಇತರ ಸದಸ್ಯರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.