ಪೊಲೀಸರಿಂದ ವಿನಾ ಕಾರಣ ಹಲ್ಲೆ: ಕ್ರಮಕ್ಕೆ ಸಚಿವರ ಪತ್ರ
Saturday, December 7, 2024
ಬೆಳ್ತಂಗಡಿ; ಮದ್ದಡ್ಕ ನಿವಾಸಿ ಸುಹೈಲ್ ಪಾಷಾ ಎಂಬವರ ಮೇಲೆ ವಿನಾ ಕಾರಣ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯ ಸರಕಾರದ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಡಿ.5 ರಂದು ಎನ್.ಐ.ಎ ತನಿಖಾ ತಂಡದವರು ಹಾಗೂ ಸ್ಥಳೀಯ ಪೊಲೀಸರು ಸುಹೈಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನೆಪದಲ್ಲಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಾಗೂ ಸುಹೈಲ್ ಅವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಉಸ್ತುವಾರಿ ಸಚಿವರಿಗೆ ಮನವಿ ನೀಡಿದ್ದರು. ಅದರಂತೆ ಇದೀಗ ಸಚಿವ ದಿನೇಶ್ ಗುಂಡೂರಾವ್ ಅವರು ಗೃಹಸಚಿವರಿಗೆ ಪತ್ರ ಬರೆದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.