ಸಿರಿ ಸಂಸ್ಥೆಯ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಸಿರಿ ಸಂಸ್ಥೆಯ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ


ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ.23 ರಂದು ಧರ್ಮಸ್ಥಳದ ಬೀಡು ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷ ಡಿ. ವೀರೇಂದ್ರ ಹೆಗ್ಗಡೆ ಅವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷೆ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಹೆಗ್ಗಡೆ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್‌ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ, ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article