ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳು ಈಡೇರಿಸಿದ ಸಂತೃಪ್ತಿ ಕಾಂಗ್ರೆಸ್ ಸರಕಾರಕ್ಕಿದೆ: ಅಶೋಕ್ ಕೊಡವೂರು

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳು ಈಡೇರಿಸಿದ ಸಂತೃಪ್ತಿ ಕಾಂಗ್ರೆಸ್ ಸರಕಾರಕ್ಕಿದೆ: ಅಶೋಕ್ ಕೊಡವೂರು


ಕಾರ್ಕಳ: ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷವು ನೀಡಿದ ಪಂಚ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿದ ಸಂತೃಪ್ತಿ ಸಿದ್ಧರಾಮಯ್ಯ ಕಾಂಗ್ರೆಸ್ ಸರಕಾರಕ್ಕೆ ಇದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಹೇಳಿದರು.

ಡಿ.17 ರಂದು ನಡೆದ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ, ಅಧ್ಯಕ್ಷರ ಅಧಿಕಾರ ಸ್ವೀಕಾರ ಹಾಗೂ ಅನುಷ್ಠಾನ ಸಮಿತಿಯ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪೂರ್ವ ಸಂದರ್ಭ ಲಿಖಿತವಾಗಿ ಸಹಿ ಹಾಕಿ ನೀಡಿದ ಭರವಸೆಗಳನ್ನು ಇಂದು ಸಮಾಜದ ಕಟ್ಟ ಕಡೆಯ ಅರ್ಹ ಫಲಾನುಭವಿಗಳು ಪಡೆದುಕೊಳ್ಳುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಜನರು ಪಟ್ಟ ಕಷ್ಟ ಅರಿತು ಈ ಪಂಚ ಉಚಿತ ಯೋಜನೆಗಳನ್ನು ಜಾರಿ ಗೊಳಿಸಲಾಗಿದೆ. ಅಧಿಕಾರಿ ವರ್ಗ ಹಾಗೂ ಅನುಷ್ಠಾನ ಸಮಿತಿ ಜೊತೆಯಾಗಿ ಕೆಲಸ ಮಾಡಿದಾಗ ಸರಕಾರದ ಯೋಜನೆಗಳು ಇನ್ನಷ್ಟು ಜನರಿಗೆ ತಲುಪಲು ಸಾಧ್ಯವಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ಅನುಷ್ಠಾನ ಸಮಿತಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಸರಕಾರದ ಯೋಜನೆಗಳು ತಲುಪುವ ಹಾಗೆ ಕೆಲಸ ಮಾಡಲಾಗುವುದು ಎಂದರು.

ಪಂಚ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ ಸರಕಾರ ಅಧಿಕಾರ ವಹಿಸಿಕೊಂಡ 24 ಗಂಟೆ ಒಳಗೆ ನೀಡಿದ ಭರವಸೆಗಳನ್ನು ಪೂರೈಸಿದ ಸರಕಾರ ಎಂಬ ಖ್ಯಾತಿಗೆ ಸಿದ್ದರಾಮಯ್ಯ ಸರಕಾರ ಪಾತ್ರವಾಗಿದೆ. ಬಡತನದ ಕಾಳಜಿ ಅರಿತು ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಇದರಿಂದ ಹಲವಾರು ಮಂದಿ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆಯುವಂತಾಗಿದೆ. ಪ್ರಚಾರ ಪಡೆಯದೆ ಸರಕಾರದ ಯೋಜನೆಯನ್ನು  ಜನರಗೆ ತಲುಪಿದೆ ಎಂದರು. ಪಂಚ ಗ್ಯಾರಂಟಿಗಳನ್ನು ನೀಡಿದ ರಾಜ್ಯ ಇದ್ದರೆ ಅದು ಕರ್ನಾಟಕ, ಅದರಲ್ಲೂ ಪಂಚ ಗ್ಯಾರಂಟಿಗಳನ್ನು ಪ್ರಪ್ರಥಮವಾಗಿ ಪಡೆದುಕೊಂಡವರು ಉಡುಪಿ ಜಿಲ್ಲೆಯವರು ಎಂದರು.

ಯೋಜನೆಯನ್ನು ಟೀಕಿಸುವರು ಎಲ್ಲಾ ಸವಲತ್ತುಗಳನ್ನು ಬಿಡಬಹುದು ಎಂದು ಮನವಿ ಮಾಡಿದರು. ಪಂಚ ಗ್ಯಾರಂಟಿ ನೀಡುವುದರಿಂದ ಸರಕಾರ ದಿವಾಳಿಯಾಗುತ್ತದೆ ಎಂದು ಹೇಳುವವರು ಸರಕಾರದ ಸವಲತ್ತನ್ನು ಪಡೆಯದೆ ಯೋಜನೆಯನ್ನು ಬಿಡಬಹುದು ಇದರಿಂದ ಉಳಿಕೆಯಾದ ಹಣ ಬಡವರಿಗಾಗಿ ಬೇರೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದರು. ಸಮಿತಿಯ ಸದಸ್ಯರು ಟೀಕೆ ಮಾಡುವವರಿಗೆ ಈ ಯೋಜನೆ ಬಿಡುವಂತೆ ಮನವಿ ಮಾಡಿ ಎಂದು ತಿಳಿಸಿದರು.

ಕಾರ್ಕಳ ತಾಲೂಕು ಅನುಷ್ಠಾನ ಸಮಿತಿಗಳ ಅಧ್ಯಕ್ಷರಾದ ಅಜಿತ್ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಲು ಅನುಷ್ಠಾನ ಸಮಿತಿಯು ಕೆಲಸ ಮಾಡಲಿದೆ ಎಂದರು. ಫಲಾನುಭವಿಗಳು ಈ ಯೋಜನೆಗಳಿಂದ ಸಮಸ್ಯೆ ಉಂಟಾದಲ್ಲಿ ನಮ್ಮನ್ನ ಸಂಪರ್ಕಿಸುವಂತೆ ತಿಳಿಸಿದರು.

ತಹಶೀಲ್ದಾರ್ ಪ್ರದೀಪ್ ಆರ್., ಅನುಷ್ಠಾನ ಸಮಿತಿಯ ಕಾರ್ಯದರ್ಶಿ ಶಶಿಧರ್, ಪುರಸಭಾ ಮುಖ್ಯ ಅಧಿಕಾರಿ ರೇಖಾ ಶೆಟ್ಟಿ ಹಾಗೂ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article