ಮಗುಚಿದ ಜೆಟ್‌ಸ್ಕೀ ಬೋಟ್: ರೈಡರ್ ನಾಪತ್ತೆ, ಪ್ರವಾಸಿಗರ ರಕ್ಷಣೆ

ಮಗುಚಿದ ಜೆಟ್‌ಸ್ಕೀ ಬೋಟ್: ರೈಡರ್ ನಾಪತ್ತೆ, ಪ್ರವಾಸಿಗರ ರಕ್ಷಣೆ


ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ.

ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್ ಎಂಬವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡರ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ.

ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು.

ನಾಪತ್ತೆಯಾದ ರವಿದಾಸ್‌ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article