ಜಾಸ್ಕಿ ರೈಡರ್ ಶವ ಪತ್ತೆ

ಜಾಸ್ಕಿ ರೈಡರ್ ಶವ ಪತ್ತೆ


ಕುಂದಾಪುರ: ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ ಆಂಬ್ಯುಲೆನ್ಸ್‌ನ ಇಬ್ರಾಹಿಂ ಗಂಗೊಳ್ಳಿ, ಕೆ ಎನ್ ಡಿ ಸಿಬ್ಬಂದಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article