ಅಂತರ್ ರಾಷ್ಟ್ರೀಯ ಯೋಗ ಸ್ಪರ್ಧೆ: ಹೆಮ್ಮಾಡಿ ಕಾಲೇಜು ವಿದ್ಯಾರ್ಥಿನಿಗೆ ಚಿನ್ನ
Wednesday, December 11, 2024
ಕುಂದಾಪುರ: ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಶಿವಮೊಗ್ಗ ಇವರ ಸಹಭಾಗಿತ್ವದಲ್ಲಿ ಡಿ.9 ರಂದು ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧನ್ವಿ ಪೂಜಾರಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ವಿಜೇತರಾಗಿದ್ದಾರೆ.
ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ, ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು. ಇವರ ಜೊತೆ ಭಾರತ ದೇಶದಿಂದ 11 ರಿಂದ 15 ವರ್ಷದ ವಯಸ್ಸಿನ ವಿಭಾಗದಲ್ಲಿ ಪ್ರತಿನಿಧಿಸಿದ ಧನ್ವಿ ಪೂಜಾರಿ ಸುವರ್ಣ ಪದಕ ಗೆಲ್ಲುವುದರೊಂದಿಗೆ ನಮ್ಮ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೆಮ್ಮೆಯುಂಟು ಮಾಡಿದ್ದಾರೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.