ಮಂಗಳೂರು ವಿ.ವಿ.: ಡಿ.11 ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
Tuesday, December 10, 2024
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದಿಂದಾಗಿ ರಾಜ್ಯ ಸರ್ಕಾರದ ಆದೇಶದಂತೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಡಿಸೆಂಬರ್ 11 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.
ಡಿ.11 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.