ನಾಪತ್ತೆಯಾಗಿದ್ದ 14 ವರ್ಷದ ಬಾಲಕಿಯನ್ನು ಪತ್ತೆ ಹಚ್ಚಿದ ಪೊಲೀಸರು
Sunday, December 8, 2024
ಮಂಗಳೂರು: ಮಧ್ಯಪ್ರದೇಶದ 14 ವರ್ಷದ ಬಾಲಕಿ ಶನಿವಾರ ರಾತ್ರಿ 10 ಗಂಟೆ ವೇಳೆಗೆ ಬಿಕರ್ನಕಟ್ಟೆಯಿಂದ ನಾಪತ್ತೆಯಾಗಿದ್ದು, ಭಾನುವಾರ ಬೆಳಗ್ಗೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬಿಕರ್ನಕಟ್ಟೆ ಮಸೀದಿ ಎದುರಿನ ಒಳರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಮಧ್ಯಪ್ರದೇಶ ಮೂಲದ ರಾಜಾ ಎಂಬವರ ಪುತ್ರಿ ಈಕೆ. ಶನಿವಾರ ರಾತ್ರಿ 10 ಗಂಟೆ ವೇಳೆಗೆ ನಾಪತ್ತೆಯಾಗಿದ್ದಳು. ತಕ್ಷಣ ಹೆತ್ತವರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯ ಸಿಸಿ ಕ್ಯಾಮರಾ ಪರಿಶೀಲಿಸಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಗ್ಗೆ ಇನ್ನೊಂದು ನಿರ್ಮಾಣ ಹಂತದ ಕಟ್ಟಡ ಪ್ರದೇಶದಲ್ಲಿ ಬಾಲಕಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯನ್ನು ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.