
ಪ್ರವೀಣ್ ನೆಟ್ಟಾರು ಹತ್ಯೆ: 16 ಕಡೆ ಎನ್‌ಐಎ ದಾಳಿ
Thursday, December 5, 2024
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಸುಮಾರು ಎರಡೂವರೆ ವರ್ಷಗಳ ಹಿಂದೆ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಳ್ಯ, ಪುತ್ತೂರು, ಬೆಳ್ತಂಗಡಿ ಸಹಿತ ರಾಜ್ಯದ 16 ಸ್ಥಳಗಳಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿದೆ.
ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ
ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು 2022ರ ಜು.26ರಂದು ರಾತ್ರಿ 8 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಪ್ರಕರಣದ ತನಿಖೆಗೆ ಆರಂಭದಲ್ಲಿ ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿತ್ತು. ಬಳಿಕ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 19 ಆರೋಪಿಗಳ ಬಂಧನ ಕೂಡಾ ಆಗಿದೆ. ಇದೀಗ ತನಿಖೆಯ ಮುಂದುವರಿದ ಭಾಗವಾಗಿ ಎನ್‌ಐಎ ಇಂದು ರಾಜ್ಯದ ೧೬ ಕಡೆಗಳಲ್ಲಿ ದಾಳಿ ನಡೆಸಿದೆ.