
ಎಸ್‌ಸಿಡಿಸಿಸಿ ಬ್ಯಾಂಕ್: 2025ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ
Monday, December 2, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಇದರ 2025ನೇ ವರ್ಷದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಸೋಮವಾರ ಬ್ಯಾಂಕ್‌ನಲ್ಲಿ ಬಿಡುಗಡೆ ಮಾಡಿದರು.
ಬ್ಯಾಂಕಿನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಹಾಗೂ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.