
ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಡಿ.30 ರಂದು ‘ಸಂವಿಧಾನ ಸಂರಕ್ಷಣಾ ಜಾಥಾ’
Thursday, December 26, 2024
ಮಂಗಳೂರು: ಸಂಸತ್ತಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಡಿ.30ರಂದು ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ’ ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ 4.30ಕ್ಕೆ ನಗರದ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥ ನಡೆಸಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.