ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 6ನೇ ಆರೋಪಿಯ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 6ನೇ ಆರೋಪಿಯ ಬಂಧನ


ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಇಂದು ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಬಂಧಿತ ಆರೋಪಿ.

ಆರೋಪಿಯ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು 5 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್?ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್?ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದರು. ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಇಬ್ಬರು ಆರೋಪಿಗಳು ಆಶ್ರಯ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿರುವ ಆರೋಪಿ ನೌಷದ್ ಮನೆ ಮೇಲೆ ಕೂಡ ಎನ್‌ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಕುಟುಂಬ ಪರಾರಿ ಆಗಿತ್ತು. ನೌಷದ್ ಪತ್ತೆಗೂ ಎನ್‌ಐಎ 2 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಎನ್‌ಐಎ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ತನಿಖೆ ನಡೆಸುತ್ತಿದ್ದು, 21 ಮಂದಿಯನ್ನು ಬಂಧಿಸಿ ಆರೋಪಿಗಳ ವಿರುದ್ಧ ಚಾರ್ಶೀಟ್ ಸಲ್ಲಿಕೆ ಮಾಡಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article