
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ
Friday, December 6, 2024
ಮಂಗಳೂರು: ಡಿಸೆಂಬರ್ 7ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಯ ಕನ್ನಡ ಭಾಷಾ ಪರೀಕ್ಷೆ ಮತ್ತು ಡಿ.8 ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ.
ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ, ಪಾರದರ್ಶಕವಾಗಿ ನಡೆಸಲು ಅನುಕೂಲವಾಗುವಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಡಿಸೆಂಬರ್ 7 ಮತ್ತು 8ರಂದು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ ಗೋಯಲ್ ಆದೇಶಸಿದ್ದಾರೆ.