ಚಿನ್ನ ಕದ್ದು ಪರಾರಿಯಾಗಿದ್ದ ಆರೋಪಿ ಸೆರೆ
Wednesday, December 18, 2024
ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಲ್ಲಿ ವಿಳಾಸ ಕೇಳುವ ನೆಪದಲ್ಲಿ ಅವರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಹಳೆಯಂಗಡಿಯ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ (30) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 70 ಸಾವಿರ ಮೌಲ್ಯದ ಚಿನ್ನದ ಸರ, 50 ಸಾವಿರ ಮೌಲ್ಯದ ಸ್ಕೂಟರ್, ಸುಮಾರು 50 ಸಾವಿರ ಮೌಲ್ಯದ ಆಟೊ ರಿಕ್ಷಾ ಹಾಗೂ ಇತರ ಸ್ವತ್ತುಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ 10 ಸುಲಿಗೆ ಮತ್ತು ಕಳವಿಗೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಆರೋಪಿ 2 ತಿಂಗಳ ಹಿಂದೆ ಜಾಮೀನು ಪಡೆದುಕೊಂಡಿದ್ದ.