ನೀರು ಪೂರೈಕೆಯಲ್ಲಿ ವ್ಯತ್ಯಯ
Friday, December 13, 2024
ಮಂಗಳೂರು: ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ಪೂರೈಕೆಯಾಗುವ ರೇಚಕ ಸ್ಥಾವರದಲ್ಲಿ ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಡಿ. 16ರಂದು ವಿವಿಧ ಕಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಪಾಲಿಕೆ ಪ್ರಕಟನೆ ತಿಳಿಸಿದೆ.
ಆ ದಿನ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಫಳ್ನೀರ್, ಮುಳಿಹಿತ್ಲು, ರಥಬೀದಿ, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್‌ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್ ನಗರ, ಚಿಲಿಂಬಿ, ಕೋಡಿಕಲಂ, ಉರ್ವಾಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೊಂದೇಲ್, ಕಾವೂರು ಹಾಗೂ ಮರಕಡ ಭಾಗಶ: ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುವುದು. ಹೀಗಾಗಿ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ ಎಂದು ಪಾಲಿಕೆ ಪ್ರಕಟನೆಯಲ್ಲಿ ತಿಳಿಸಿದೆ.