ಕರಾವಳಿ ಉತ್ಸವ: ಹೆಲಿಕಾಪ್ಟರ್ ರೈಡ್‌ಗೆ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯ್ಕ ಚಾಲನೆ

ಕರಾವಳಿ ಉತ್ಸವ: ಹೆಲಿಕಾಪ್ಟರ್ ರೈಡ್‌ಗೆ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯ್ಕ ಚಾಲನೆ


ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯ್ಕ ಅವರು ಜಂಟಿಯಾಗಿ ಚಾಲನೆ ನೀಡಿದರು.

ನಗರದ ಮೇರಿಹಿಲ್ ಹೆಲಿಪ್ಯಾಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ ಅಮೈ ಮಹಾಲಿಂಗ ನಾಯಕ್ ಅವರು ಹೆಲಿಕಾಪ್ಟರ್‌ನಲ್ಲಿ ಸಂಚರಿಸುವ ಮೂಲಕ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪೊಲೀಸು ವರಿಷ್ಠಾಧಿಕಾರಿ ಯತೀಶ್, ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದು, ಹೆಲಿಕಾಪ್ಟರ‍್ನಲ್ಲಿ ಸಂಚರಿಸಿದರು.


ಬಳಿಕ ಮಾತನಾಡಿದ ಹರೇಕಳ ಹಾಜಬ್ಬ ಮತ್ತು ಮಹಾಲಿಂಗ ನಾಯಕ್ ಅವರು ಕರಾವಳಿ ಉತ್ಸವದ ಸೊಬಗಿಗೆ ಸಾರ್ವಜನಿಕರಿಗೆ ಹೆಲಿಕಾಪ್ಟರ್ ಸಂಚಾರ ಆರಂಭಿಸಿರುವುದು ಶ್ಲಾಘನೀಯವಾಗಿದೆ, ಪ್ರವಾಸಿಗರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಪೊ?ರೀತ್ಸಾಹಿಸಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ಮಾತನಾಡಿ ಕರಾವಳಿ ಉತ್ಸವವನ್ನು ಆಕರ್ಷಣೀಯವನ್ನಾಗಿಸಲು ಹೆಲಿಕಾಪ್ಟರ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹೆಲಿಕಾಪ್ಟರ‍್ನಲ್ಲಿ ಸಂಚರಿಸಿ ಮಂಗಳೂರು ನಗರವನ್ನು ವೈಮಾನಿಕವಾಗಿ ದರ್ಶನ ಮಾಡಿ ಹಾಗೂ ಕಡಲ ಕಿನಾರೆ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.  


ಖಾಸಗಿ ಸಂಸ್ಥೆಯ ಹೆಲಿಕಾಪ್ಟರ್ ಇದನ್ನು ನಡೆಸಿಕೊಡಲಿದ್ದು, ಜಿಲ್ಲಾಡಳಿತ ಸಹಕಾರ ನೀಡಲಿದೆ. ಪ್ರತಿ ಟ್ರಿಪ್ ನಲ್ಲಿ 6 ಜನರಿಗೆ ಅವಕಾಶ ಇದೆ ಎಂದು ಹೇಳಿದರು.  ಮುಂದಿನ ದಿನಗಳಲ್ಲಿ ಹೆಲಿಟೂರಿಸಂ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇದು ಹೆಚ್ಚು ಸಹಕಾರಿಯಾಗಲಿದೆ ಎಂದರು.

ಮಂಗಳೂರಿಗೆ ಪ್ರದಕ್ಷಿಣೆ..

ಈ ಬಾರಿಯ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಒಬ್ಬರಿಗೆ ತಲಾ ರೂಪಾಯಿ 4,500 ವೆಚ್ಚದಲ್ಲಿ ಮಂಗಳೂರು ಪ್ರದೇಶವನ್ನು ಆಕಾಶ ಮಾರ್ಗದಲ್ಲಿ ಹೆಲಿಕಾಪ್ಟರ್ ಮೂಲಕ ಸುತ್ತ ಹಾಕಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಡಿ.21ರಿಂದ 31ರವರೆಗೆ ಮೇರಿಹಿಲ್ ಹೆಲಿಪ್ಯಾಡ್ ಮೂಲಕ ಒಂದು ಬಾರಿ ಆರು ಮಂದಿ ಪ್ರಯಾಣಿಸಲು ಸಾಧ್ಯವಿರುವ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಬಹುದಾಗಿದೆ. 

ಈ ಹೆಲಿಕಾಪ್ಟರ್ ಮಂಗಳೂರು ಆಸುಪಾಸಿನಲ್ಲಿ ಸುಮಾರು 5ರಿಂದ 7ನಿಮಿಷಗಳ ಒಳಗೆ ಆಕಾಶದಲ್ಲಿ ಒಂದು ಪ್ರದಕ್ಷಿಣೆ ಬಂದು ಮೇರಿ ಹಿಲ್‌ಗೆ ಮರಳುತ್ತದೆ. ಈ ಬಾರಿಯ ಕರಾವಳಿ ಉತ್ಸವದ ವಿಶೇಷ ಆಕರ್ಷಣೆಯಾಗಿ ಮತ್ತು ಹೆಲಿಟೂರಿಸಂ ಅನ್ನು ಮಂಗಳೂರು ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮೇರಿ ಹಿಲ್ ಹೆಲಿಪ್ಯಾಡ್ ನಿಂದ ಇಂದು ಸಂಜೆ ಪ್ರಾಯೋಗಿಕವಾಗಿ ಪತ್ರಕರ್ತರ ಒಂದು ತಂಡ ಕ್ಯಾಪ್ಟನ್ ವಿ.ಎಸ್ .ಮಲಿಕ್ ರ ನೇತೃತ್ವದಲ್ಲಿ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಒಂದು ಸುತ್ತು ನಗರ ಪ್ರದಕ್ಷಿಣೆ ಮಾಡಿದೆ. 

ಮೂರು ನಿಮಿಷದಲ್ಲಿ ಮೇರಿ ಹಿಲ್ ಪಣಂಬೂರು, ಮಹಾನಗರ ಪಾಲಿಕೆ, ಪಂಪ್ ವೆಲ್ ನೇತ್ರಾವತಿ ನದಿ ಕಿನಾರೆಯ ಮೂಲಕ ಮರಳಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article