ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಂತಾಪ

ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ. 

ಎಸ್.ಎಂ.ಕೃಷ್ಣ ಅವರು ರಾಜ್ಯ, ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಸಲ್ಲಿಸಿರುವ ಸೇವೆ ಅನುಪಮವಾದುದು. ಮುತ್ಸದ್ದಿ ರಾಜಕಾರಣಿಯಾಗಿದ್ದ ಅವರು ಅಜಾತಶತ್ರುಗಳಾಗಿದ್ದರು. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದ್ದು, ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ.ಅಡ್ಯಂತಾಯ, ಮೊಹಮ್ಮದ್ ಮಸೂದ್, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಎಐಸಿಸಿ ಕಾರ್ಯದರ್ಶಿ ವಿ.ಪಿ.ಮೋಹನ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪದಾಧಿಕಾರಿಗಳಾದ ಎಂ.ಎಸ್.ಮೊಹಮ್ಮದ್, ಜಿ.ಎ.ಬಾವಾ, ಮಿಥುನ್ ರೈ, ರಕ್ಷಿತ್ ಶಿವರಾಂ, ಜಿ.ಕೃಷ್ಣಪ್ಪ, ಇನಾಯತ್ ಅಲಿ, ಟಿ.ಎಂ.ಶಹೀದ್, ಲಾವಣ್ಯ ಬಳ್ಳಾಲ್, ಮುಖಂಡರಾದ ಬಿ.ಎಚ್.ಖಾದರ್, ಶಶಿಧರ್ ಹೆಗ್ಡೆ, ಯು.ಕೆ.ಮೋನು, ಸುರೇಶ್ ಬಳ್ಳಾಲ್, ಇಬ್ರಾಹೀಂ ಕೋಡಿಜಾಲ್, ಸದಾಶಿವ್ ಉಳ್ಳಾಲ್, ಮಮತಾ ಗಟ್ಟಿ, ಭರತ್ ಮುಂಡೋಡಿ, ಮಹಾಬಲ ಮಾರ್ಲ, ಕೆ.ಅಶ್ರಫ್, ಜಿಲ್ಲಾ ಉಪಾಧ್ಯಕ್ಷರು ಅಬ್ದುಲ್ ರವೂಫ್, ನಿರಾಜ್ ಚಂದ್ರಪಾಲ್, ಸಂತೋಷ್ ಶೆಟ್ಟಿ, ಶುಭೋದಯ ಆಳ್ವ, ವಿಕಾಸ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು,  ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಕೆಪಿಸಿಸಿ ಸದಸ್ಯರು, ಮ.ನ.ಪಾ ಸದಸ್ಯರು, ಮಾಜಿ ಮೇಯರ್, ಮಾಜಿ ಕಾರ್ಪೊರೇಟರ್ ಗಳು ಸಂಪಾತ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article