ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರ ಜಾಮೀನು ಅರ್ಜಿ ತಿರಸ್ಕೃತ

ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರ ಜಾಮೀನು ಅರ್ಜಿ ತಿರಸ್ಕೃತ

ಮಂಗಳೂರು: ಸಾಲಗಾರ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರ ಜಾಮೀನು ಅರ್ಜಿ ಮಂಗಳೂರು ಕೋರ್ಟ್‌ನಲ್ಲಿ ತಿರಸ್ಕೃತಗೊಂಡಿದೆ. ಇದೇ ವೇಳೆ ಅನಾರೋಗ್ಯ ಕಾರಣಕ್ಕೆ ಕೋರ್ಟ್ ಅನುಮತಿ ಮೇರೆಗೆ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಎಸ್.ಕೆ. ಉಳ್ಳಾಲ್ ಎಂಬ ವಕೀಲ ಅನಿಲ್ ಲೋಬೊ ಪರವಾಗಿ ಜಾಮೀನು ಅರ್ಜಿ ಸಲ್ಲಿಸಿದ್ದರು.  ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಹಂತದಲ್ಲಿ ಜಾಮೀನು ನೀಡುವ ಯಾವುದೇ ಸಕಾರಣ ಕಾಣುವುದಿಲ್ಲ. ಹಾಗಾಗಿ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾ ಮಾಡುವುದಾಗಿ ಹೇಳಿ ಈ ಕುರಿತ ಮುಂದಿನ ವಿಚಾರಣೆಯನ್ನು ಡಿ.27ಕ್ಕೆ ಮುಂದೂಡಿದೆ.

ಡಿ.18ರಂದು ಅನಿಲ್ ಲೋಬೋನನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿ ಜೈಲಿಗೆ ತಳ್ಳಿದ್ದರು. ಆತನಿಗೆ ಜಿಲ್ಲಾ ಕೋರ್ಟ್ ಡಿ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ನಡುವೆ ಡಿ.19ರಂದು ಲೋಬೊ ಪರ ವಕೀಲರು ಕೋರ್ಟಿನಲ್ಲಿ ವಾದ ಮಂಡಿಸಿ ಆತನಿಗೆ ಅನಾರೋಗ್ಯ ಕಾಡುತ್ತಿರುವುದಾಗಿ ಹೇಳಿದ್ದಲ್ಲದೆ, ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ನೀಡಬೇಕೆಂದು ಕೇಳಿಕೊಂಡಿದ್ದರು. ಅದರಂತೆ, ಕೋರ್ಟ್ ಆತನ ಚಿಕಿತ್ಸೆಗೆ ಅನುಮತಿ ನೀಡಿದ್ದು, ಡಿ.19ರ ರಾತ್ರಿ ವೇಳೆ ಜೈಲಿನಿಂದ  ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article