‘ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

‘ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

ಮಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ ಮೂಲಕ ನಗರ ಪ್ರದೇಶದ ಬಡವರಿಗೆ ಸ್ವಂತ ಸೂರು ಅಥವಾ ಮನೆ ಸೌಲಭ್ಯ ಒದಗಿಸುವ ಈ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರಾಸಕ್ತಿ ವಹಿಸಿರುವ ಅಂಶ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಳಿದ್ದ ಚುಕ್ಕೆಗುರುತು ಇಲ್ಲದ ಪ್ರಶ್ನೆಗೆ ಕೇಂದ್ರ ವಸತಿ ಸಚಿವ ತೋಖಾನ್ ಸಾಹು ನೀಡಿರುವ ಉತ್ತರದಲ್ಲಿ ಈ ಗಂಭೀರ ವಿಚಾರ ಬಯಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶವ್ಯಾಪಿಯಾಗಿ ನಗರ ಪ್ರದೇಶದಲ್ಲಿ ನೆಲೆಸಿರುವ ವಸತಿರಹಿತರು, ಕಡುಬಡವರು, ಮಧ್ಯಮ ವರ್ಗದ ಬಡ ಕುಟುಂಬಗಳಿಗೆ ಯೋಗ್ಯ ವಸತಿ ಒದಗಿಸುವ ಉದ್ದೇಶದಿಂದ ಕಳೆದ ಸೆಪ್ಟಂಬರ್ 1ರಿಂದ ಪಿಎಂಎವೈ-ಯು 2.0 ಯೋಜನೆ ಅನುಷ್ಠಾನಕ್ಕೆ ತಂದಿದೆ. ಈ ಪಿಎಂಎವೈ-ಯು 2.0 ಯೋಜನೆ ಜಾರಿ ಮಾರ್ಗಸೂಚಿ, ನಿಯಮಾವಳಿ ಪ್ರಕಾರ ಇಲ್ಲಿವರೆಗೆ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ 29 ರಾಜ್ಯಗಳು ಕೇಂದ್ರದ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಸಿದ್ದರಾಮಯ್ಯ ಸರ್ಕಾರ ಮಾತ್ರ ಇಲ್ಲಿವರೆಗೂ ನಗರ ಪ್ರದೇಶದ ಬಡವರಿಗೆ ವಸತಿ ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಒಪ್ಪಂದ ಮಾಡಿಕೊಂಡಿಲ್ಲ ಎಂದು ಕೇಂದ್ರ ವಸತಿ ಸಚಿವ ತೋಖಾನ್ ಸಾಹು ತಿಳಿಸಿದ್ದಾರೆ.

ಪಿಎಂಎವೈ-ಯು 2.0 ಯೋಜನೆಯಡಿ ನಗರ ಪ್ರದೇಶದಲ್ಲಿನ ಅರ್ಹ ಫಲಾನುಭವಿಗಳು ಕೈಗೆಟಕುವ ದರದಲ್ಲಿ ಮನೆ ನಿರ್ಮಾಣ, ಖರೀದಿ ಅಥವಾ ಬಾಡಿಗೆ ಪಡೆದುಕೊಳ್ಳುವ ವ್ಯವಸ್ಥೆಯಿದೆ. ಫಲಾನುಭವಿಗಳಿಂದ ಮನೆ ನಿರ್ಮಾಣ(ಬಿಎಲ್‌ಸಿ), ಕೈಗೆಟುವ ಮನೆಗಳ ಪಾಲುದಾರಿಕೆ ವ್ಯವಸ್ಥೆ(ಎಎಚ್‌ಪಿ), ಕೈಗೆಟಕುವ ದರದ ಬಾಡಿಗೆ ಮನೆ ವ್ಯವಸ್ಥೆ(ಎಆರ್‌ಎಚ್), ಬಡ್ಡಿ ಸಬ್ಸಿಡಿ ಸ್ಕೀಮ್(ಐಎಸ್‌ಎಸ್) ವ್ಯವಸ್ಥೆ ಎಂಬ ನಾಲ್ಕು ವಿಭಾಗದಡಿ ಈ ಪಿಎಂಎವೈ-ಯು 2.0 ಯೋಜನೆ ಪ್ರಯೋಜನ ಪಡೆದುಕೊಳ್ಳಬಹುದೆಂದು ವಸತಿ ಸಚಿವರು ವಿವರಿಸಿದ್ದಾರೆ.

ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು , ಕೊಳಗೇರಿ ನಿವಾಸಿಗಳಿಗೆ ಪ್ರಾಮುಖ್ಯತೆ ನೀಡಲಾಗುವುದು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article