ಮಹಿಳೆಯರು ಜೀವನದಲ್ಲಿ ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯುವಲ್ಲಿ ಪ್ರಯತ್ನಿಸಿ ಸಫಲರಾಗಬೇಕು: ಸೌಮ್ಯ ರೆಡ್ಡಿ

ಮಹಿಳೆಯರು ಜೀವನದಲ್ಲಿ ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯುವಲ್ಲಿ ಪ್ರಯತ್ನಿಸಿ ಸಫಲರಾಗಬೇಕು: ಸೌಮ್ಯ ರೆಡ್ಡಿ


ಮಂಗಳೂರು: ತಾನು ಮಹಿಳಾ ಪರ ಹೋರಾಟಗಾರ್ತಿಯಾಗಿಯೇ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದು.‌ ಇಲ್ಲಿಯೂ ಮಹಿಳಾ ಮೀಸಲಾತಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಶ್ರಮಿಸುವೆ. ಪುರುಷ ಪ್ರಧಾನ ಸಮಾಜದಲ್ಲಿ ಸಾಕಷ್ಟು ಸ್ಪರ್ಧೆಗಳಿದ್ದರೂ ಮಹಿಳೆಯರಲ್ಲಿ ಸಾಧಿಸುವ ಛಲ ಇರಬೇಕು ಅನ್ನುವ ಕಿವಿಮಾತನ್ನು ಹೇಳಿದರು. ಕರ್ನಾಟಕ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವಲ್ಲಿ ಸಫಲವಾಗಿದೆ. ಅದೇ ರೀತಿ ಮಹಿಳೆಯರು ಜೀವನದಲ್ಲಿ ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯುವಲ್ಲಿ ಪ್ರಯತ್ನಿಸಿ ಸಫಲರಾಗಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಕರೆ ನೀಡಿದರು. 


ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿಯವರು ಅಧಿಕಾರ ವಹಿಸಿ ಕೊಂಡ ನಂತರ ಮೊತ್ತ ಮೊದಲ ಸಭೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿ ಕೊಂಡಿದ್ದು ನಮಗೆಲ್ಲರಿಗೂ ಸಂತಸ ತರುವ ವಿಚಾರ. "ಮಹಿಳಾ ಸದಸತ್ವ ಅಭಿಯಾನ ಮತ್ತು ಮಹಿಳಾ ಸಮ್ಮಾನ್" ಶೀರ್ಷಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷೆ ಶಾಲೆಟ್ ಪಿಂಟೋರವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಆಗಮಿಸಿದ ಸೌಮ್ಯ ರೆಡ್ಡಿಯವರನ್ನು ಆರತಿ ಬೆಳಗಿಸಿ ಪುಷ್ಪಾರ್ಚನೆಯೊಂದಿಗೆ ಕಡಬ ಬ್ಲಾಕಿನ ಲಕ್ಷ್ಮೀ ಸುಬ್ರಮಣ್ಯರವರ ಸ್ವರಚಿತ ಕಾಂಗ್ರೆಸ್ ಗೀತೆಯೊಂದಿಗೆ ಅದ್ದೂರಿ ಸ್ವಾಗತ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಸೌಮ್ಯ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಹಾಗೂ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಮಂಜುನಾಥ್ ಭಂಡಾರಿ ಅವರು, ಮಹಿಳೆಯರು ಸಂಘಟನಾತ್ಮಕವಾಗಿ ಕೆಲಸ ಮಾಡಿದಾಗ ಮಾತ್ರ ಮಹಿಳಾ ನಾಯಕತ್ವ ಬೆಳೆಯುವುದು. ಮಹಿಳೆಯರು ತಮ್ಮ‌ ಸ್ವಪ್ರಯತ್ನದಿಂದ ರಾಜಕೀಯದಲ್ಲಿ ಮುಂದೆ ಬರಬೇಕು ಎಂದು ಕರೆ ನೀಡಿದರು. 

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಮಾತನಾಡಿ, ಪಂಚ ಗ್ಯಾರಂಟಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗದಿದ್ದರೂ ಪಂಚ ಗ್ಯಾರಂಟಿಗಳಿಂದ ದಕ್ಷಿಣ ಕನ್ನಡದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರು ಮಾತನಾಡಿ ಪಕ್ಷವನ್ನು ಮುನ್ನಡಸುವಲ್ಲಿ ಪುರುಷರಷ್ಟೇ ಮಹಿಳೆಯರು ಸರಿಸಮಾನರಾಗಿದ್ದಾರೆ. ರಾಜಕೀಯದಲ್ಲಿ ತಮಗೆ ಸಿಕ್ಕಿರುವ ಅವಕಾಶವನ್ನು ಸೂಕ್ತರೀತಿಯಲ್ಲಿ ಬಳಸಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರುವಂತಾಗಬೇಕು. 

ಅಧ್ಯಕ್ಷೆ ಶಾಲೆಟ್ ಪಿಂಟೋರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕವು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು. 


ಮಾಜಿ ಸಚಿವರುಗಳಾದ ರಮಾನಾಥ ರೈ ಹಾಗೂ ಅಭಯ ಚಂದ್ರ ಜೈನ್ ರವರು ಮಾತನಾಡಿ ಮಹಿಳಾ ಸಂಘಟನೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. 

ಕರ್ನಾಟಕ ಗೇರು ಆಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಮಹಿಳಾ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. 

ಹೆಚ್ಚು ಮಹಿಳಾ ಸದಸ್ಯರನ್ನು ನೋಂದಣಿ ಮಾಡಿಸಿದ ಮಂಗಳೂರು ದಕ್ಷಿಣ ಬ್ಲಾಕ್ ನ ಶೈಲಜಾ ನೀತಾ ಡಿ'ಸೋಜಾ ಮತ್ತು ಗೀತಾ ಅತ್ತಾವರ್, ಬೆಳ್ತಂಗಡಿ ಬ್ಲಾಕ್ ನ ಮಧುರಾ ರಾಘವ್, ಮಂಗಳೂರು ನಗರ ಬ್ಲಾಕ್ ನ ಸ್ವರೂಪ ಶೆಟ್ಟಿ, ಉಳ್ಳಾಲ ಬ್ಲಾಕ್ ನ ಸುರೇಖಾ ಚಂದ್ರಹಾಸ್,ಆರಿಫಾ  ಮುಂತಾದವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ನ ಹಿರಿಯ ಸದಸ್ಯೆಯರಿಗೆ ಆದ್ಯತೆ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಷಾ ಅಂಚನ್ ರವರ ಸುಂದರ ನಿರೂಪಣೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಯಶಸ್ವಿಯಾಗಿ ಮೂಡಿಬಂತು.

ಮಾಜಿ ಶಾಸಕ ಸಕುಂತಲಾ ಶೆಟ್ಟಿ, ಜಿ.ಎ. ಭಾವ, ಪದ್ಮರಾಜ್ ಪೂಜಾರಿ, ಲಾವಣ್ಯ ಬಲ್ಲಾಳ್, ರಕ್ಸಿತ್ ಶಿವರಾಮ್, ಕೃಪಾ ಆಳ್ವಾ, ಸುರೇಂದ್ರ ಕಂಬಳಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ನಾಯಕಿಯರು ಮೊದಲದವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article