ಕುದ್ಮುಲ್ ರಂಗರಾವ್ ಸ್ಮಾರಕಕ್ಕೆ ಬಿ.ಎಲ್. ಸಂತೋಷ್ ಭೇಟಿ
Saturday, December 21, 2024
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಅತ್ತಾವರದ ಬಾಬುಗುಡ್ಡೆಯಲ್ಲಿರುವ ನಾಡಿನ ಮಹಾನ್ ಸಮಾಜ ಸುಧಾರಕರಲ್ಲೊಬ್ಬರಾದ ಕುದ್ಮುಲ್ ರಂಗರಾವ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನವನ್ನು ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮೇಯರ್ ಮನೋಜ್ ಕುಮಾರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ವೈ, ಉಪ ಮೇಯರ್ ಭಾನುಮತಿ, ಮನಪಾ ಸದಸ್ಯರಾದ ಭರತ್ ಎಸ್., ಶೈಲೇಶ್ ಶೆಟ್ಟಿ, ಸಂದೀಪ್ ಗರೋಡಿ, ಕುದ್ಮಲ್ ರಂಗ ರಾವ್ ಏಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಹೃದಯನಾಥ, ಶಾಮ ಕರ್ಕೇರ, ಪ್ರಮುಖರಾದ ರಘುವೀರ್ ಬಾಬುಗುಡ್ಡೆ, ಸಂದೀಪ್ ಬೋಳೂರು, ಶಿವಪ್ಪ ನಂತೂರು ಸೇರಿದಂತೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ಉಪಸ್ಥಿತರಿದ್ದರು.