.jpeg)
ಬಾಂಗ್ಲಾ ದೇಶದ ಹಿಂದುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು: ಪದ್ಮರಾಜ್ ಆರ್. ಪೂಜಾರಿ ಒತ್ತಾಯ
Tuesday, December 3, 2024
ಮಂಗಳೂರು: ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡನೀಯ. ಅವರ ಸುರಕ್ಷತೆ, ರಕ್ಷಣೆಗೆ ಕೇಂದ್ರ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಮಾನವೀಯ ಕೃತ್ಯಗಳು ಆತಂಕಕಾರಿ. ಕೇಂದ್ರ ಸರ್ಕಾರ ಈ ಬಗ್ಗೆ ಕೂಡಲೇ ಮಧ್ಯಸ್ಥಿಕೆ ವಹಿಸಿ ಇಂತಹ ಘಟನೆಗಳ ನಿಯಂತ್ರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಬೇಕು. ಅಲ್ಪಸಂಖ್ಯಾತ ಆಯೋಗ ಸ್ಥಾಪನೆ ಮಾಡಿ, ಅಲ್ಲಿನ ಹಿಂದುಗಳಿಗೆ ನ್ಯಾಯ ಒದಗಿಸಬೇಕು. ಈ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಮಂಡಿಸಿ, ವಿಶೇಷ ನಿಯೋಗವನ್ನು ಬಾಂಗ್ಲಾದೇಶಕ್ಕೆ ಕಳುಹಿಸಿ, ಕಷ್ಟದಲ್ಲಿ ಇರುವ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು. ಹಾಗೇಯೆ ಉದ್ಯೋಗ ಹರಸಿಕೊಂಡು ಹೋಗಿರುವ ಭಾರತೀಯರು ಬಾಂಗ್ಲಾದಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಕರೆಸಿ ಅವರಿಗೆ ಭಾರತದಲ್ಲಿಯೇ ಉದ್ಯೋಗಾವಕಾಶ ನೀಡುವ ಜವಾಬ್ದಾರಿ ವಹಿಸಬೇಕು ಎಂದು ಪದ್ಮರಾಜ್ ಆರ್. ಪೂಜಾರಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.