ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ದ.ಕ. ಜಿಲ್ಲಾಧ್ಯಕ್ಷರಾಗಿ ಪ್ರವೀಣ್‌ಚಂದ್ರ ರಾವ್ ಆಯ್ಕೆ
ಮಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ (ಅರುಣ್ ಕುಮಾರ್ ಬಣ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಬಿ.ಪ್ರವೀಣ್‌ಚಂದ್ರ ರಾವ್ ಆಯ್ಕೆಯಾಗಿದ್ದಾರೆ.
ಕನ್ನಡವನ್ನು ಉಳಿಸುವುದು, ಬೆಳೆಸುವುದು, ನೆಲಜಲ, ಸಂಸ್ಕೃತಿಯ ರಕ್ಷಣೆ ಮುಖ್ಯ ಗುರಿಯಾಗಿಟ್ಟು ಕೆಲಸ ನಿರ್ವಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯು, ಭ್ರಷ್ಟಾಚಾರ ವಿರುದ್ಧ ಹಾಗೂ ಕನ್ನಡ ನಾಡಿನ ಸೇವೆಗಾಗಿ ಎಲ್ಲ ಸವಾಲುಗಳನ್ನು ಎದುರಿಸಿ ನಿರಂತರ ಹೋರಾಟ ನಡೆಸುತ್ತಿರುವ ಬಿ.ಪ್ರವೀಣ್‌ಚಂದ್ರ ರಾವ್ ಅವರಿಗೆ ಜಿಲ್ಲಾ ನಾಯಕತ್ವದ ಹೊಣೆಯನ್ನು ವಹಿಸಿದೆ ಎಂದು ವೇದಿಕೆಯ ಜಿಲ್ಲಾ ಉಸ್ತುವಾರಿ ಸಂತೋಷ್ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರವೀಣ್‌ಚಂದ್ರ ರಾವ್ ಅವರು ಭ್ರಷ್ಟಾಚಾರ ವಿರುದ್ಧದ ಏಕಾಂಗಿ ಹೋರಾಟದಲ್ಲಿ ಸುಳ್ಳು ಆರೋದಲ್ಲಿ 50 ದಿನ ಜೈಲುವಾಸ ಕೂಡ ಅನುಭವಿಸಿದ್ದಾರೆ. ಅವರ ಹೋರಾಟಕ್ಕೆ ಮುಂದಿನ ದಿನಗಳಲ್ಲಿ ವೇದಿಕೆಯು ಪೂರ್ಣ ಬೆಂಬಲ ನೀಡಲಿದೆ ಎಂದರು.
ಬಿ.ಪ್ರವೀಣ್‌ಚಂದ್ರ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮುಖಂಡ ದೇವಿ ಪ್ರಕಾಶ್ ಉಪಸ್ಥಿತರಿದ್ದರು.