ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸುವ ಕುರಿತು ಸರ್ಕಾರದ ನಿಲುವು ಪ್ರಶ್ನಿಸಿದ ಶಾಸಕ ಕಾಮತ್

ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸುವ ಕುರಿತು ಸರ್ಕಾರದ ನಿಲುವು ಪ್ರಶ್ನಿಸಿದ ಶಾಸಕ ಕಾಮತ್


ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ನಿಯಮ 73ರಡಿ ಗಮನ ಸೆಳೆಯುವ ಸೂಚನೆ ಮೂಲಕ ಸರ್ಕಾರದ ನಿಲುವು ಏನೆಂಬುದನ್ನು ಪ್ರಶ್ನಿಸಿದರು.

ಈ ಬಗ್ಗೆ ಅಧಿಕೃತವಾಗಿ ಉತ್ತರಿಸಿದ ರಾಜ್ಯ ಸರ್ಕಾರವು, ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆ ಮಾಡುವ ಸಂಬಂಧ ವಕೀಲರ ಸಂಘದಿಂದ ಹಾಗೂ ಜನಪ್ರತಿನಿಧಿಗಳಿಂದ ಮನವಿಯು ಸ್ವೀಕೃತವಾಗಿದ್ದರೂ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಪ್ರಸ್ತುತ ಭಾರತದ The High Court of Karnataka (Establishment of Permanent Benches At Dharwad and Gulbarga) Order, 2013: 08.08.2013ರನ್ವಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಸಾರ್ವಜನಿಕರ ವ್ಯಾಜ್ಯಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿನ ಪ್ರಧಾನ ಪೀಠದಲ್ಲಿ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಈಗ ಇರುವ ವ್ಯವಸ್ಥೆಯಲ್ಲಿಯೇ ಈ ಭಾಗದ ವ್ಯಾಜ್ಯಗಳನ್ನು ಸಮರ್ಥವಾಗಿ ಸದರಿ ಪೀಠದಲ್ಲಿಯೇ ನಿರ್ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮೂಲಕ ಉತ್ತರಿಸಿದೆ. 

ಅದಾಗಿಯೂ ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸದೇ ಕೂಡಲೇ ಧನಾತ್ಮಕ ನಿಲುವು ತೆಗೆದುಕೊಳ್ಳುವ ಮೂಲಕ ಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕೆಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article