.jpeg)
ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸ್ಪೀಕರ್ ಸೂಚನೆ
Monday, December 2, 2024
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಫೆಂಗಲ್ ಚಂಡಮಾರುತ ಪರಿಣಾಮದ ಬಗ್ಗೆ ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಎನ್‌ಡಿಆರ್‌ಎಫ್ ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದಾರೆ.
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ, ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊಂಡು ಸಹಕರಿಸುವಂತೆ ಸಭಾಧ್ಯಕ್ಷರು ಸೂಚನೆ ನೀಡಿದ್ದು, ಜನ ಸಾಮಾನ್ಯರೂ ಕೂಡಾ ಎಚ್ಚರಿಕೆ ವಹಿಸುವಂತೆ ಸ್ಪೀಕರ್ ಮನವಿ ಮಾಡಿದ್ದಾರೆ.