ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಜೆ.ಆರ್. ಲೋಬೊ ಸಂತಾಪ
Wednesday, December 11, 2024
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಮಾಜಿ ಶಾಸಕ ಜೆ. ಆರ್. ಲೋಬೊರವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಕಂಡ ದೂರದೃಷ್ಟಿಯುಳ್ಳ ನಾಯಕ, ಅಪ್ರತಿಮ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ ಮತ್ತು ಐಟಿ-ಬಿಟಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಬೆಂಗಳೂರು ನಗರ ಅವರ ಕಾಲದಲ್ಲಿಯೇ ಸಿಲಿಕಾನ್ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.