
ನಗರಕ್ಕೆ ಯೋಧ ಅನೂಪ್ ಪಾರ್ಥೀವ ಶರೀರ
Thursday, December 26, 2024
ಮಂಗಳೂರು: ಜಮ್ಮುಕಾಶ್ಮೀರ ಪೂಂಛ್‌ನಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31) ಅವರ ಪಾರ್ಥೀವ ಶರೀರವನ್ನು ಬುಧವಾರ ತಡರಾತ್ರಿ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು.
ದಕ್ಷಿಣ ಕನ್ನಡ ಸಂಸದ ಕಾ. ಬ್ರಿಜೇಶ್ ಚೌಟ ಅವರು ವಿಮಾನ ನಿಲ್ದಾಣಕ್ಕೆ ಭೇಟಿ, ಸೇನಾ ವಿಮಾನದಿಂದ ಪಾರ್ಥೀವ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ಯೋಧರೂ ಆಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಅವರೂ ಸೇನಾ ಸಿಬಂದಿಗಳಿಗೆ ಜತೆಯಾದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರೂ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿದರು.