
ಸಂವಿಧಾನ ಸಂರಕ್ಷಣಾ ಜಾಥಾ ಮುಂದೂಡಿಕೆ
Sunday, December 29, 2024
ಮಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ ಜಾರಿಯಲ್ಲಿರುವುದರಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಡಿ.30 ರಂದು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ 'ಸಂವಿಧಾನ ಸಂರಕ್ಷಣಾ ಜಾಥಾ'ವನ್ನು ಮುಂದೂಡಿಲಾಗಿದೆ ಎಂದು ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.