
ಮಾರ್ಕೆಟಿಂಗ್ ವಿಚಾರದಲ್ಲಿ ವಂಚನೆ: ಬಂಧನ
ಮಂಗಳೂರು: ಮಾರ್ಕೆಟಿಂಗ್ ವಿಚಾರದಲ್ಲಿ ಟಿಎಆರ್‌ಐ ಎಂಬ ಆಪ್ ಮೂಲಕ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೇರಳದ ಮಾವೂರ್ ಕೋಝಿಕೋಡ್‌ನ ಪಳ್ಳಿಯೊಲ್ ನಿವಾಸಿ ಆಕಾಶ್ ಎ. (22) ಎಂದು ಗುರುತಿಸಲಾಗಿದೆ.
ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯು ಟಿಎಆರ್‌ಐನಿಂದ ಪ್ರತಿನಿಧಿಸಿ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬ್ರ ರಿಜಿಸ್ಟರ್ ಆಗಿದ್ದು, ಮುಂಬೈನ ಅಂಧೇರಿ(ಇ)ಯಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಒಳಗೊಂಡಿದ್ದು, ಮಾರ್ಕೆಟಿಂಗ್ ನೆಪದಲ್ಲಿ ನಿಮಗೆ ಸಂಬಂಧಿಸಿದ ಮೊಬೈಲ್ ನಂಬ್ರದಿಂದ ಕಾಲ್ ಮಾಡಿ ಕಿರುಕುಳ ಕೊಡುತ್ತಿರುವುದರ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು ಕೂಡಲೇ ಅಂಧೇರಿ(ಇ) ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ನಂಬ್ರ 9967014480 ನೇದರ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂಬುದಾಗಿ ತಿಳಿಸಿ ಅಲ್ಲದೇ ಅಂಧೇರಿಯ ಕೆನರಾ ಬ್ಯಾಂಕ್‌ನಲ್ಲಿ ಫಿರ್ಯಾದಿದಾರರ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಇದಕ್ಕೆ ದಾಖಲೆ ಬಳಸಿ ಸಿಮ್ ಖರೀದಿಸಿರುವುದಾಗಿಯೂ, ಆ ಕಾರಣದಿಂದ ಫಿರ್ಯಾದುದಾರರ ಬಂಧಸಿ ಸೆರೆವಾಸಕ್ಕೆ ಒಳಗಾಗಿಸುವದಾಗಿ ತಿಳಿಸಿ, ಡಿಜಿಟಲ್ ಆರೆಸ್ಟ್ ಮಾಡುವುದಾಗಿ ಬಿಂಬಿಸಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 1,71,00,000 ರೂ. ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ದೂರು ದಾಖಲಾಗಿದೆ.
ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರ ನಿರ್ದೇಶನದಂತೆ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ರವಿಶಂಕರ್ ಅವರ ಮಾರ್ಗದರ್ಶನದಂತೆ ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಎಂ.ಪಿ. ನೇತೃತ್ವದಲ್ಲಿ ಸದ್ರಿ ಪ್ರಕರಣದಲ್ಲಿ ಇನ್ನುಳಿದ ಆರೋಪಿತರ ಪತ್ತೆ ಕಾರ್ಯಚರರಣೆ ನಡೆಯುತ್ತಿದೆ.