ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ


ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಸಿ.ಟಿ. ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಮಿತ್ ಶಾ ಮತ್ತು ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದರು. ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.


ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಮಾತನಾಡಿ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ. ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆಯಿಂದ ಕೆಳಗೆ ಇಳಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿ, ಇಡೀ ಸಮಾಜವೇ ಪ್ರೀತಿ, ಅಭಿಮಾನ ದಿಂದ ಕಾಣುವ ಅಂಬೇಡ್ಕರ್ ಅವರನ್ನು ಅಮಿತ್ ಶಾ ಅವಮಾನಿಸಿದ್ದಾರೆ. ಈ ವ್ಯಕ್ತಿಯ ಮೇಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕು. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಸಿ.ಟಿ. ರವಿಯನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು. ಈಗಾಗಲೇ ಬಂಧಿಸಿರುವ ಸಿ.ಟಿ. ರವಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇಡೀ ಸಮಾಜದ ಮಹಿಳೆಯರು ಸಿ.ಟಿ. ರವಿ ಹೇಳಿಕೆ ಖಂಡಿಸಬೇಕು ಎಂದರು.

ಪಕ್ಷದ ಮುಖಂಡರಾದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಪ್ರಕಾಶ್ ಸಾಲ್ಯಾನ್, ಪುರುಷೋತ್ತಮ ಚಿತ್ರಾಪುರ, ಮುಖಂಡರಾದ ಸುರೇಶ್ ಬಳ್ಳಾಲ್, ಕೆ. ಹರಿನಾಥ್, ಸದಾಶಿವ್ ಉಳ್ಳಾಲ್, ಅಬ್ದುಲ್ ರವೂಫ್, ಕೆ.ಪಿ. ಥೋಮಸ್, ಭರತ್ ಮುಂಡೋಡಿ, ಕೆ. ಅಶ್ರಫ್, ಪದ್ಮನಾಭ ಅಮೀನ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಅಬ್ಬಾಸ್ ಅಲಿ, ಟಿ. ಹೊನ್ನಯ್ಯ, ನೀರಜ್ ಚಂದ್ರ ಪಾಲ್, ಟಿ.ಕೆ. ಸುಧೀರ್, ಜಯಶೀಲ ಅಡ್ಯಂತಾಯ, ಎ.ಸಿ. ವಿನಯರಾಜ್, ಸತೀಶ್ ಪೆಂಗಲ್, ಚೇತನ್ ಬೆಂಗ್ರೆ, ಕೆ. ಅಪ್ಪಿ, ಮ.ನ.ಪಾ. ವಿಪಕ್ಷ ನಾಯಕ ಅನಿಲ್ ಕುಮಾರ್, ಗಿರೀಶ್ ಶೆಟ್ಟಿ, ವಿಕಾಸ್ ಶೆಟ್ಟಿ, ದಿನೇಶ್ ಕುಂಪಲ, ಪ್ರೇಮ್ ಬಳ್ಳಾಲ್‌ಭಾಗ್, ರಮಾನಂದ ಪೂಜಾರಿ, ನಾಗವೇಣಿ, ತನ್ವೀರ್ ಶಾ, ರೂಪ ಚೇತನ್, ಚಂದ್ರಕಲಾ ಜೋಗಿ, ಶಾಂತಲಾ ಗಟ್ಟಿ, ಸಬಿತಾ ಮಿಸ್ಕಿತ್, ಅಶ್ರಫ್ ಬಸ್ತಿಕಾರ್ ಮತ್ತಿತರರು ಉಪಸ್ಥಿತರಿದ್ದರು.

ಸಾಹುಲ್ ಹಮೀದ್ ಸ್ವಾಗತಿಸಿದರು. ಕೊನೆಗೆ ವಿಸ್ವಾಶ್ ದಾಸ್ ಕುಮಾರ್ ವಂದಿಸಸಿದರು.







Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article