ಟೆಕ್ವಾಂಡೊ ಶಕ್ತಿ ವಿದ್ಯಾರ್ಥಿ ಎಸ್‌ಜಿಎಫ್‌ಐ ರಾಷ್ಟ್ರ ಮಟ್ಟಕ್ಕೆ
Tuesday, December 10, 2024
ಮಂಗಳೂರು: ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೆಕ್ವಾಂಡೊ ಚಾಂಪಿಯನ್‌ಶಿಪ್ ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.3 ಮತ್ತು 4 ರಂದು ನಡೆಯಿತು.
ಈ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಎಸ್‌ಜಿಎಫ್‌ಐ ರಾಷ್ಟ್ರೀಯ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಅದೇ ರೀತಿ ಹರ್ಷವೇಣಿ ಬಾಲಕಿಯ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ.
ಈ ಸಂಧರ್ಭದಲ್ಲಿ ಇವರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್. ಪ್ರಧಾನ ಸಲಹೆಗಾರ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

