ತುಳು ಹಾಡು ಹಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.

ತುಳು ಹಾಡು ಹಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.


ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ಕರಾವಳಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 

ಮಂಗಳೂರು ನಗರದ ಕಮಿಷನರ್ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ಕಮಿಷನರೆಟ್ ಘಟಕದ ವತಿಯಿಂದ ಗುರುವಾರ ಸಂಜೆ ಆಯೋಜಿಸಿದ್ದ ಸ್ನೇಹ ಸೌಹಾರ್ದ ಸಮ್ಮಿಲನದಲ್ಲಿ ಜಿಲ್ಲಾಧಿಕಾರಿ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಮೂಲಕ ಅವರು ಜನರ ಮನಸ್ಸನ್ನ ಗೆದ್ದಿದ್ದಾರೆ.

ಮೂಲತಃ ತಮಿಳುನಾಡಿನವರಾದ ಜಿಲ್ಲಾಧಿಕಾರಿಯವರು ಮಂಗಳೂರಿನಲ್ಲಿ ತಮ್ಮ ಕರ್ತವ್ಯ ಸಲ್ಲಿಸುತ್ತಿದ್ದು, ತುಳು ಸಂಪ್ರದಾಯ, ಆಚಾರ ವಿಚಾರಗಳ ಬಗ್ಗೆ ಅರಿತುಕೊಂಡಿರುವ ಅವರು ತುಳುನಾಡಿನ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳು ಕಳೆದ ಲೋಕಸಭೆ ಚುನಾವಣೆ ವೇಳೆ ತುಳು ಭಾಷೆಯಲ್ಲೇ ಮತದಾನ ಜಾಗೃತಿ ಮಾಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article