ಕರಾವಳಿಯಲ್ಲಿ ಚುರುಕುಗೊಂಡ ಮಳೆ: ಮೀನುಗಾರಿಕೆ ನಿಷೇಧ, ಕಾಸರಗೋಡಿನಲ್ಲಿ ಶಾಲಾ ಕಾಲೇಜಿಗೆ ರಜೆ

ಕರಾವಳಿಯಲ್ಲಿ ಚುರುಕುಗೊಂಡ ಮಳೆ: ಮೀನುಗಾರಿಕೆ ನಿಷೇಧ, ಕಾಸರಗೋಡಿನಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು/ಕಾಸರಗೋಡು: ಫೆಂಗಲ್ ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ತಟ್ಟಿದೆ. ಜಿಲ್ಲೆಯಾದ್ಯಂತ ದಿನಪೂರ್ತಿ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣವಿದ್ದು, ಡಿ.೩ರಂದು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೀನುಗಾರಿಕೆ ನಿಷೇಧ..

ಪ್ರತಿಕೂಲ ವಾತಾವರಣದ ಹಿನ್ನೆಲೆಯಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಬೋಟ್‌ಗಳು ಕೂಡಲೇ ಹಿಂತಿರುಗುವಂತೆ ಸೂಚಿಸಲಾಗಿದೆ. ಪ್ರವಾಸಿಗರು ಬೀಚ್‌ಗಳಿಗೆ ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ. 

ಕಾಸರಗೋಡಿನಲ್ಲಿ ಚುರುಕುಗೊಂಡ ಮಳೆ ಶಾಲಾ ಕಾಲೇಜುಗಳಿಗೆ ರಜೆ:

ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಡಿ.3ರಂದು ಜಿಲ್ಲಾಧಿಕಾರಿ ಕೆ.ಇಂಬುಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article