
ನೂತನವಾಗಿ ನಿರ್ಮಾಣಗೊಂಡ ಶಾಲಾ ಕೊಠಡಿಯ ಉದ್ಘಾಟನೆ
Monday, December 2, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಮಾದರಿ ಶಾಲೆ ಮಾರಿಗುಡಿ, ಸುರತ್ಕಲ್ ಇಲ್ಲಿ ನೂತನವಾಗಿ 13.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶಾಲಾ ಕೊಠಡಿಯನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು.
ಸ್ಥಳೀಯ ಕಾರ್ಪೊರೇಟರ್ ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯನಿಯಾದ ಜಯಂತಿ, ಶಾಲಾಭಿವೃದ್ಧಿ ಸಮಿತಿಯ ಗೌರವ ಸಲಹೆಗಾರ ವೆಂಕಟರಮಣ ಮಯ್ಯ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ದಿನಕರ್ ಇಡ್ಯಾ, ಮಂಡಲದ ಉಪಾಧ್ಯಕ್ಷ ರಾಘವೇಂದ್ರ ಶೆಣೈ, ಮಂಡಲದ ಕಾರ್ಯದರ್ಶಿ ಪುಷ್ಪರಾಜ್, ವಾರ್ಡ್ ಅಧ್ಯಕ್ಷರಾದ ರಾಜೇಶ್ ಮುಕ್ಕ, ಸುರೇಶ್ ಕರ್ಕೇರ, ಸುಧಾಕರ್, ಕೈಲಾಶ್, ಅಶೋಕ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.