ಶಾಲಾ ಕೊಠಡಿಯಲ್ಲಿ ಅತ್ಯಾಚಾರ: ಬಂಧನ

ಶಾಲಾ ಕೊಠಡಿಯಲ್ಲಿ ಅತ್ಯಾಚಾರ: ಬಂಧನ

ಮಂಗಳೂರು: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವೀಕ್ಷಣೆಗೆ ತೆರಳಿದ್ದ ಯುವತಿಯೊಬ್ಬಳನ್ನು ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವಕೊಬ್ಬ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ನಾವೂರು ನಿವಾಸಿ ಜಯಂತ ಬಂಧಿತ ಆರೋಪಿ. 

ಡಿ.14ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಬಲವಂತವಾಗಿ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾಗಿ ನೊಂದ ಯುವತಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ. 

ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article