ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪನೆಗೆ ಶಕ್ತಿಮೀರಿ ಪ್ರಯತ್ನ: ಕ್ಯಾ. ಚೌಟ
Saturday, December 21, 2024
ಮಂಗಳೂರು: ಎನ್‌ಐಎ ತನಿಖಾ ತಂಡದಿಂದಾಗಿ ಪ್ರವೀಣ್ ನೆಟ್ಟಾರು ಪ್ರಕರಣ ಭೇದಿಸಿ 20 ಮಂದಿ ಸಮಾಜಘಾತುಕ ಶಕ್ತಿಗಳ ಹೆಡೆಮುರಿ ಕಟ್ಟುವುದಕ್ಕೆ ಸಾಧ್ಯವಾಗಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ದೊರೆಯಬೇಕಾದರೆ ಕರಾವಳಿಯಲ್ಲಿ ಸ್ಲೀಪರ್ ಸೆಲ್‌ನಂತೆ ಇರುವ ದೇಶದ್ರೋಹಿಗಳ ಕೃತ್ಯ ಮಟ್ಟ ಹಾಕುವುದಕ್ಕೆ ಕರಾವಳಿಗೆ ಸದಾ ಎನ್‌ಐಎ ಸಂಸ್ಥೆಯ ಬರಬೇಕಿದೆ.
ನಮ್ಮ ಕಾರ್ಯಕರ್ತರನ್ನು ಹತ್ಯೆ ಮಾಡಿ ದಕ್ಷಿಣ ಕನ್ನಡ ಕೋಮು ಸೂಕ್ಷ್ಮ ಪ್ರದೇಶ ಎಂಬ ಹಣೆಪಟ್ಟಿ ಕಟ್ಟುವ ಮೂಲಕ ಅಭಿವೃದ್ಧಿಯನ್ನು ಹಳಿತಪ್ಪಿಸಲು ನೋಡುತ್ತಿರುವ ದುಷ್ಟ ಶಕ್ತಿಗಳ ನಿಯಂತ್ರಿಸಬೇಕಿದೆ. ಈ ಹಿನ್ನಲೆಯಲ್ಲಿ ಮಂಗಳೂರನ್ನು ಕೇಂದ್ರೀಕರಿಸಿ ಈ ಭಾಗದಲ್ಲಿ ಎನ್‌ಐಎ ಘಟಕ ಸ್ಥಾಪಿಸಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತಿದ್ದೇನೆ.
ಸ್ಲೀಪರ್ ಸೆಲ್‌ಗಳಿಗೆ ಕುಮ್ಮಕ್ಕು-ಉತ್ತೇಜನ ನೀಡುತ್ತಿರುವ ಡ್ರಗ್ಸ್ ಮಾಫಿಯಾವನ್ನೂ ಬೇರುಸಮೇತ ಕಿತ್ತೆಸೆಯುವುದಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪನೆಯಾಗಬೇಕು. ಈ ಸಂಬಂಧ ಸಂಸದನಾಗಿ ನಾನು ಕೂಡ ಶಕ್ತಿಮೀರಿ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಕ್ಯಾ. ಚೌಟ ಪ್ರಕಟಣೆಯಲ್ಲಿ ಭರವಸೆ ನೀಡಿದ್ದಾರೆ.