ಬಿ.ಎಲ್. ಸಂತೋಷ್ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ
Sunday, December 22, 2024
ಮಂಗಳೂರು: ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಬಿ.ಎಲ್. ಸಂತೋಷ್ ಅವರು ನವೀಕರಣಗೊಂಡ ಬಿಜೆಪಿ ಕಚೇರಿಗೆ ತಮ್ಮ ಮೊದಲ ಭೇಟಿ ನೀಡಿದರು.
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕಾರ್ಯಕರ್ತರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು. ಹಾಗೂ ಕಾರ್ಯಾಲಯ ಮತ್ತು ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮೇಯರ್ ಮನೋಜ್ ಕುಮಾರ್, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ರಾಜೇಶ್ ಕಾವೇರಿ, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.