
ಗ್ರಾಮಾಭಿವೃದ್ಧಿ ಯೋಜನೆಯಿಂದ 11 ನಿಗ೯ತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ
Saturday, December 28, 2024
ಮೂಡುಬಿದಿರೆ: ಧಮ೯ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ತಾಲೂಕಿನ ನಾಲ್ಕು ವಲಯದ 11 ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ನ್ನು ತಾಲೂಕಿನ ಯೋಜನಾಧಿಕಾರಿ ಸುನೀತಾ ನಾಯ್ಕ್ ವಿತರಿಸಿದರು.
ಪಾಲಡ್ಕ ಗ್ರಾ.ಪಂನ ಮಾಜಿ ಉಪಾಧ್ಯಕ್ಷ ಸುಕೇಶ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರುಗಳಾದ ಲತಾ ಹೆಗ್ಡೆ (ಪಡುಕೊಣಾಜೆ), ಶ್ರೀಧರ್ ಬಂಗೇರ ( ವಾಲ್ಪಾಡಿ), ಜನಜಾಗೃತಿ ವೇದಿಕೆಯ ಶಿತಾ೯ಡಿ ವಲಯ ದ ಉಪಾಧ್ಯಕ್ಷ ಲಕ್ಷ್ಮಣ್ ಸುವಣ೯, ಪದಾಧಿಕಾರಿಗಳು, ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.