ಮೂಡುಬಿದಿರೆಯಲ್ಲಿ ಮತ್ತೆ ಅಭಿವೃದ್ಧಿಯ ಶಕೆ ಆರಂಭ: 5.12 ಕೋ.ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ

ಮೂಡುಬಿದಿರೆಯಲ್ಲಿ ಮತ್ತೆ ಅಭಿವೃದ್ಧಿಯ ಶಕೆ ಆರಂಭ: 5.12 ಕೋ.ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ


ಮೂಡುಬಿದಿರೆ: 2023-24 ಹಾಗೂ 24-25 ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನ, ನಗರೋತ್ಥಾನ ಹಂತ-4 ಎಸ್.ಎಫ್.ಸಿ ಮುಕ್ತ ನಿಧಿ ಅನುದಾನ ಹಾಗೂ ಪುರಸಭಾ ನಿಧಿಯ ಅನುದಾನದಡಿ ಸಹಿತ ಒಟ್ಟು 5.12 ಕೋ.ರೂ. ವೆಚ್ಚದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶನಿವಾರ ಪುರಸಭೆಯಲ್ಲಿ ಶಿಲಾನ್ಯಾಸಗೈದರು.

ನಂತರ ಮಾತನಾಡಿದ ಕೋಟ್ಯಾನ್ ಅವರು ಪುರಸಭೆಯ ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಒಂದು ಕೋ. ವೆಚ್ಚದಲ್ಲಿ ಮೂಡುಬಿದಿರೆಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ. ಜ್ಯೋತಿನಗರದ ಬಳಿ ಎಂ.ಆರ್.ಘಟಕವನ್ನು ಸ್ಥಾಪಿಸಲು ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಇಲ್ಲದೆ ಪುರಸಭೆಯ ಅನುದಾನದಲ್ಲಿ ಪುರಸಭೆಗೆ ಲಿಫ್ಟ್ ವ್ಯವಸ್ಥೆ ವಿವಿಧ ಕಾಮಗಾರಿಗಳು ನಡೆಯಲಿದ್ದು ಇವುಗಳು ಸಮರ್ಪಕವಾಗಿ ನಡೆಯುವಂತೆ ಅಧಿಕಾರಿಗಳು ಮತ್ತು ಪುರಸಭೆಯ ಸದಸ್ಯರು ಗಮನ ಹರಿಸಬೇಕೆಂದ ಅವರು ಇದೀಗ ಮತ್ತೆ ಅಭಿವೃದ್ಧಿ ಕಾಮಗಾರಿಗಳ ಶಕೆ ಆರಂಭಗೊಂಡಿದೆ ಎಂದು ಹೇಳಿದರು.

ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಭಿವೃದ್ಧಿ ಕಾರ್ಯಗಳು ನಡೆಯಲು ಎಲ್ಲರೂ ಸಹಕಾರ ನೀಡಬೇಕೆಂದು ಹೇಳಿದರು.

ಉಪಾಧ್ಯಕ್ಷ ನಾಗರಾಜ್ ಪೂಜಾರಿ, ವಾಡ್೯ ಸದಸ್ಯ ರಾಜೇಶ್ ನಾಯ್ಕ್, ಹಿರಿಯ ಸದಸ್ಯ ಪಿ.ಕೆ. ಥೋಮಸ್, ನಗರೋತ್ಥಾನದ ಯೋಜನಾ ನಿರ್ದೇಶಕ ಪುರಂದರ ಕೋಟ್ಯಾನ್, ಕಾರ್ಯಪಾಲಕ ಅಭಿಯಂತರ ತೇಜ್, ಪುರಸಭಾ ಎಂಜಿನಿಯರ್ ನಳಿನ್ ಕುಮಾರ್ ಉಪಸ್ಥಿತರಿದ್ದರು.

ಮುಖ್ಯಾಧಿಕಾರಿ ಇಂದು ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ ಹೆಚ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಆಲಂಗಾರು ದೇವಸ್ಥಾನದ ಸುಬ್ರಹ್ಮಣ್ಯ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.








Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article